ರಾಮನಗರ: ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಟೋಲ್ ಬಳಿ KSRTC ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಇಂದು ಬೆ.8:30ಕ್ಕೆ ಕನಕಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸು ಕಗ್ಗಲೀಪುರ ವ್ಯಾಪ್ತಿಯ ಸೋಮನಹಳ್ಳಿ ಟೋಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಪಲ್ಟಿ ಪರಿಣಾಮ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳುಗಳಿಗೆ ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


