ಬೆಂಗಳೂರು: ಸಂಜಯ್ ನಗರದ ನಿವಾಸದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದರು.
ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದ್ದು, ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಇನ್ನು ಸಾವಿಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


