ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗುಲ್ಲಹಳ್ಳಿ ಗ್ರಾನದ (25) ಮಧು ಮೃತ ದುರ್ದೈವಿಯಾಗಿದ್ದಾರೆ.
ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿಯು ವೇಗವಾಗಿ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


