ಚಿಕ್ಕೋಡಿ: ಯಮಕನಮರಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 16,848 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗೋವಾದಿಂದ ಆಂಧ್ರಕ್ಕೆ ಮದ್ಯವನ್ನು ಅಕ್ರಮ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಹಾರ್ಡ್‌ವೇರ್ ವಸ್ತು ಸಾಗಾಟ ಮಾಡುತ್ತೇವೆ ಎಂದು ಲೈಸೆನ್ಸ್ ಪಡೆದು ಹಾರ್ಡ್‌ವೇರ್ ಬದಲಿಗೆ ಗೋವಾದ ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಒಟ್ಟು 28 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಹಲಗೆ, ಸದಾಶಿವ ಗೇರಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


