ತಿಪಟೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಾಂತ್ರಿಕತೆ ಮತ್ತು ಆಧುನಿಕ ಯುಗದಲ್ಲಿನ ಸವಾಲುಗಳನ್ನು ಮೆಟ್ಟಿ ನಿಲ್ಲುವುದು ಅನಿವಾರ್ಯ ಎಂದು, ತಿಪಟೂರು ನಗರದ ಟ್ಯಾಗೋರ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾಕ್ಟರ್ ಆರ್.ವಿ. ಅನಿಲ್ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟ್ಯಾಗೋರ್ ಶಿಕ್ಷಣ ಸಂಸ್ಥೆಯಿಂದ ಶೇಖಡ ನೂರರಷ್ಟು ಫಲಿತಾಂಶ ಬಂದಿದ್ದು, ಸಮಸ್ಯೆ 53 ವರ್ಷಗಳಿಂದ ನಗರ ಪ್ರದೇಶದಲ್ಲಿ ತಾಲೂಕಿನ ಮಕ್ಕಳ ಮನಸ್ಥಿತಿ ಮತ್ತು ಬಾಲಕರ ಆರ್ಥಿಕ ಸ್ಥಿತಿಗತಿ ಅರಿತುಕೊಂಡು, ನಗರ ಪ್ರದೇಶದ ಮಕ್ಕಳಿಗೆ ಸರಿಸಮಾನವಾದ ಶಿಕ್ಷಣವನ್ನು ಕೊಡುವ ನಿಟ್ಟಿನಲ್ಲಿ ಟ್ಯಾಗೋರ್ ವಿದ್ಯಾಸಂಸ್ಥೆ, ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಂತ್ರಿಕ ವಿಭಾಗದ ಮುಖ್ಯಸ್ಥ ಎಂ.ಜೆ. ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಕೆ. ಶಶಿಕಲಾ ಮತ್ತಿತರರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


