ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡುವ ಭಾರತೀಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಇಸ್ರೇಲ್-ಹಮಾಸ್ ಸಂಘರ್ಷ ಆರಂಭಗೊಂಡ ನಂತರ ವಿಶ್ವ ಸಂಸ್ಥೆಯ ಅಂತರರಾಷ್ಟ್ರೀಯ ಸಿಬ್ಬಂದಿಯೊಬ್ಬರು ಬಲಿಯಾದ ಮೊದಲ ಘಟನೆ ಇದಾಗಿದೆ. ಮೃತ ವ್ಯಕ್ತಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸದಸ್ಯರಾಗಿದ್ದರು. ಜೊತೆಗೆ ಭಾರತೀಯ ಸೇನೆಯ ಮಾಜಿ ಸಿಬ್ಬಂದಿಯಾಗಿದ್ದರು ಎಂದು ತಿಳಿದುಬಂದಿದ್ದರೂ, ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ರಫಾದಲ್ಲಿ ಭಾರತೀಯ ವ್ಯಕ್ತಿಯ ಜೊತೆಗಿದ್ದ ಇನ್ನೊಬ್ಬ ವಿಶ್ವ ಸಂಸ್ಥೆಯ ಸಿಬ್ಬಂದಿ ಗಾಯಗೊಂಡಿದ್ದರು. ಅವರು ರಫಾದಲ್ಲಿರುವ ಯುರೋಪಿಯನ್ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು. ವಿಶ್ವಸಂಸ್ಥೆ ಸಿಬ್ಬಂದಿ ಮೇಲಿನ ಎಲ್ಲಾ ದಾಳಿಗಳನ್ನು ಗುಟೆರಸ್ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್ ಹಕ್ ಅವರು ಹೇಳಿಕೆ ನೀಡಿದ್ದಾರೆ.
ವಿಶ್ವಸಂಸ್ಥೆ ವಾಹನವನ್ನು ಗಾಜಾದಲ್ಲಿ ಹೊಡೆದುರುಳಿಸಲಾಯಿತು, ನಮ ಸಹೋದ್ಯೋಗಿಗಳಲ್ಲಿ ಒಬ್ಬರು ಸಾವನ್ನಪ್ಪಿ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್ ನಲ್ಲಿ ಗುಟೆರೆಸ್‌ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


