nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026
    Facebook Twitter Instagram
    ಟ್ರೆಂಡಿಂಗ್
    • ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ
    • ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್
    • ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ
    • ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ
    • ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ: ‘ದೇಶದ್ರೋಹಿ’ಗಳ ಜೊತೆ ಸೇರಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಪ
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಚ್ಚೇದನ ಪಡೆದ 3 ವರ್ಷಗಳ ಬಳಿಕ ಗೇಟ್ಸ್ ಫೌಂಡೇಶನ್ ಗೆ ರಾಜೀನಾಮೆ ನೀಡಿದ ಮೆಲಿಂಡಾ
    ರಾಜ್ಯ ಸುದ್ದಿ May 15, 2024

    ವಿಚ್ಚೇದನ ಪಡೆದ 3 ವರ್ಷಗಳ ಬಳಿಕ ಗೇಟ್ಸ್ ಫೌಂಡೇಶನ್ ಗೆ ರಾಜೀನಾಮೆ ನೀಡಿದ ಮೆಲಿಂಡಾ

    By adminMay 15, 2024No Comments1 Min Read
    melinda

    ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ವಿಚ್ಛೇದಿತ ಪತ್ನಿ ಮೆಲಿಂದಾ ಫ್ರೆಂಚ್ ಗೇಟ್ಸ್ ಅವರು ಗೇಟ್ಸ್ ಫೌಂಡೇಶನ್​ ಗೆ ರಾಜೀನಾಮೆ ನೀಡಿದ್ದಾರೆ. ಬಿಲ್​ ಗೇಟ್ಸ್​ ಜೊತೆ ವಿಚ್ಛೇದನ ಪಡೆದ ಮೂರು ವರ್ಷದ ಬಳಿಕ ಮಿಲಿಂಡಾ ಫ್ರೆಂಚ್​​ ಗೇಟ್ಸ್ ಅವರು ಬಿಲ್​ ಆ್ಯಂಡ್​ ಮಿಲಿಂಡಾ ಗೇಟ್ಸ್​ ಫೌಂಡೇಷನ್​ ನ ಸಹ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ವಿಶ್ವದ ಬಿಲಿಯನೇರ್​​ ಉದ್ಯಮಿ ಬಿಲ್​ ಗೇಟ್ಸ್​ 20 ವರ್ಷಗಳ ಹಿಂದೆ ಪತ್ನಿ ಮಿಲಿಂಡಾ ಜೊತೆ ಸೇರಿ ವಿಶ್ವದ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆ ಸ್ಥಾಪಿಸಿದ್ದರು.

    ಈ ಮೂಲಕ ವಿವಿಧ ದೇಶಗಳಲ್ಲಿ ಸಾಮಾಜಿಕ ಕಾರ್ಯ ನಿರ್ವಹಿಸಿದ್ದಾರೆ. “ಬಿಲ್ ಮತ್ತು ನಾನು ಒಟ್ಟಾಗಿ ನಿರ್ಮಿಸಿದ ಸಂಸ್ಥೆ​ಯ ಬಗ್ಗೆ ನನಗೆ ಹೆಮ್ಮೆ ಇದೆ. ಇದರೊಂದಿಗೆ ನಾವು ಜಗತ್ತಿನೆಲ್ಲೆಡೆ ಅಸಾಮಾನತೆ ಪರಿಹಾರ ಸೇರಿದಂತೆ ಹಲವು ಅದ್ಭುತ ಕೆಲಸಗಳನ್ನು ಮಾಡಿದ್ದೇವೆ” ಎಂದು ಮಿಲಿಂಡಾ ತಿಳಿಸಿದ್ದಾರೆ. ಇದೇ ವೇಳೆ, ಫೌಂಡೇಷನ್​ ಸಿಇಒ ಮಾರ್ಕ್​​ ಸುಜಾಮ್ಯಾನ್​ ಅವರನ್ನು ಶ್ಲಾಘಿಸಿದ್ದಾರೆ. ಮಿಲಿಂಡಾ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಬಿಲ್ ಗೇಟ್ಸ್​​, ಸಂಸ್ಥೆಯಲ್ಲಿ ಮಿಲಿಂಡಾ ​ ಅವರ ನಿರ್ಣಾಯಕ ಕೊಡುಗೆಗಳಿಗೆ ಧನ್ಯವಾದ. ಆಕೆ ಸಂಸ್ಥೆ ತೊರೆಯುತ್ತಿರುವುದು ಬೇಸರದ ವಿಷಯ. ಆದರೆ, ಭವಿಷ್ಯದಲ್ಲಿ ತಮ್ಮ ಸಾಮಾಜಿಕ ಕಾರ್ಯದ ಮೂಲಕ ದೊಡ್ಡ ಪರಿಣಾಮ ಬೀರಲಿದ್ದಾರೆ ಎಂದು ತಿಳಿಸಿದ್ದಾರೆ.

    ಮಿಲಿಂಡಾ ನಿರ್ಗಮನದ ಹಿನ್ನೆಲೆಯಲ್ಲಿ ಫೌಂಡೇಷನ್​ ಹೆಸರು ಬದಲಾಯಿಸಲಿದ್ದು, ಕೇವಲ ಗೇಟ್ಸ್​ ಫೌಂಡೇಷನ್​ ಎಂದು ಇರಲಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಫೌಂಡೇಷನ್​ ನಲ್ಲಿ ಅವರು ಮಹಿಳೆಯರು ಮತ್ತು ಕುಟುಂಬಗಳ ಭವಿಷ್ಯ ಕೇಂದ್ರೀಕರಿಸಿ ಕೆಲಸಗಳಿಗೆ ಬದ್ಧತೆ ತೋರುವುದಾಗಿ ತಿಳಿಸಿದ್ದರು. ಇದೀಗ ಸಂಸ್ಥೆ ತೊರೆದಿದ್ದು ಗೇಟ್ಸ್​ ಅವರೊಂದಿಗೆ ಒಪ್ಪಂದದ ಭಾಗವಾಗಿ 12.5 ಬಿಲಿಯನ್​ ಡಾಲರ್​​ ಪಡೆಯಲಿದ್ದಾರೆ. ಈ ಹಣವನ್ನು ಗೇಟ್ಸ್​ ವೈಯಕ್ತಿಕ ಹಣದಿಂದ ನೀಡಲಿದ್ದು, ಫೌಂಡೇಷನ್​ ದತ್ತಿಯಿಂದ ನೀಡುವುದಿಲ್ಲ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್‌ ಐಆರ್: ತುಮಕೂರಿನಲ್ಲಿ ಶೇ.100 ಅರ್ಜಿ ವಿತರಣೆ

    July 24, 2026

    ತುಮಕೂರು: ಎಸ್‌ ಐಆರ್ ಎನ್ಯುಮರೇಷನ್ ಅರ್ಜಿ ವಿತರಣೆಯಲ್ಲಿ ಜು.23ರ ಗುರುವಾರದ ಅಂತ್ಯಕ್ಕೆ ಶೇ.100ರಷ್ಟು ಪ್ರಗತಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ…

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಸರಗೂರು: ಜಮೀನಿಗೆ ನುಗ್ಗಿದ್ದ ಕಾಡಾನೆ ಮರಿ ಯಶಸ್ವಿ ಸೆರೆ: ರಾಂಪುರ ಆನೆ ಶಿಬಿರಕ್ಕೆ ಸ್ಥಳಾಂತರ

    July 24, 2026

    ಕುಡಿಯುವ ನೀರಿನ ಪೂರೈಕೆಗಾಗಿ ತಾಲೂಕಿಗೆ 1 ಕೋಟಿ, ಜಿಲ್ಲೆಗೆ 5 ಕೋಟಿ | ರೈತರಿಗೆ ಸಮಸ್ಯೆಯಾಗದಂತೆ ಕ್ರಮ: ಡಿಸಿಎಂ ಡಾ.ಜಿ.ಪರಮೇಶ್ವರ್

    July 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.