ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಹುಬ್ಬಳ್ಳಿಯ ಅಂಜಲಿ ಮನೆ ಹಾಗೂ ಕಿಮ್ಸ್ ಆಸ್ಪತ್ರೆ ಮುಂದೆ ಯುವತಿ ಮೃತದೇಹ ಅಂತ್ಯಕ್ರಿಯೆಗೆ ರವಾನಿಸಿದಂತೆ ತಡೆ ಹಿಡಿದ ಘಟನೆ ನಡೆದಿದೆ.
ನೆನ್ನೆ ಬೆಳ್ಳಂಬೆಳಗ್ಗೆ ಇಲ್ಲಿನ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿದ ಆರೋಪಿ ಗಿರೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳು ಅಂಜಲಿ ಮನೆಗೆ ಬರುವವರೆಗೂ ಮೃತದೇಹ ಎತ್ತಲು ಬಿಡುವುದಿಲ್ಲ ಎಂದು ಕಿಮ್ಸ್ ಆಸ್ಪತ್ರೆ ಹಾಗೂ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಕೊಲೆ: ಪ್ರೀತಿ ನಿರಾಕರಿಸಿದ್ದಕ್ಕೆ ಅಂಜಲಿ ಜೀವ ತೆಗೆದ ಪಾಪಿ. ಮೃತದೇಹದ ಆಂಬ್ಯುಲೆನ್ಸ್ ಗೆ ತಡೆ. ಅಂಜಲಿ ಮೃತದೇಹ ಅಂತಿಮ ಆಸ್ಪತ್ರೆ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಆಂಬ್ಯುಲೆನ್ಸ್ ನಲ್ಲಿ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು ಆಂಬ್ಯುಲೆನ್ಸ್ ಮುಂದೆ ಸಾಗದಂತೆ ತಡೆ ನೀಡಿದರು. ಇನ್ನೂ ಎಷ್ಟು ಹೆಣ್ಣುಮಕ್ಕಳ ಜೀವ ಬಲಿಯಾಗಬೇಕು ಎಂದೆಲ್ಲ ಕಣ್ಣೀರಿಟ್ಟರು. ಈ ವೇಳೆ ನೇಹಾ ಹಿರೇಮಠ ತಂದೆ ನಿರಂಜನ್ ಹಿರೇಮಠ ಸಹ ಧರಣಿಯಲ್ಲಿದ್ದರು. ಹಂತಕನ್ನೂ ಗಲ್ಲಿಗೇರಿಸುವ ಮೂಲಕ ಯುವತಿ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಗುಂಡಾ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇದೊಂದು ಹೀನ ಕೃತ್ಯ ಎಂದೆಲ್ಲ ಧಿಕ್ಕಾರ ಕೂಗಿದರು. ಸರ್ಕಾರ ಆಡಳಿತ ವಿರುದ್ಧ ಕಿಡಿ ಕಾರಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರ ಮಧ್ಯೆ ವಾಗ್ವಾದ, ತಳ್ಳಾಟ ನೂಕಾಟ ನಡೆಯಿತು. ನಂತರ ಪೊಲೀಸರ ಆಂಬ್ಯುಲೆನ್ಸ್ ಸಾಗಲು ಅನುವು ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


