ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ಮಹಿಳೆಯೊಬ್ಬಳು ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮಹಿಳೆಯು ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಕ್ ಹಾಳೆಯಲ್ಲಿ ಸುತ್ತಿ, ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.
ಮಹಿಳೆಯ ವಿರುದ್ಧ ಕ್ರಮಕ್ಕೆ, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಶೋಧ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


