ತುಮಕೂರು: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್ ಪೊಲೀಸ್ ಠಾಣೆಯ ಎಎಸ್‌ಐ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಲಪ್ಪನಗುಡ್ಡೆ ಸಮೀಪ ನಡೆದಿದೆ. ಮೃತ ಎಎಸ್‌ಐ ಯನ್ನು ಬಿ. ವೆಂಕಟೇಶ್ ಎಂದು ಗುರುತಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬುಧವಾರ ಸಂಜೆ ಕೆಲಸದ ನಿಮಿತ್ತ ತಮ್ಮ ಬೈಕ್ ನಲ್ಲಿ ಎಡೆಯೂರಿಗೆ ಹೋಗಿ ಹಿಂತಿರುಗುತ್ತಿದ್ದ ಸಂದರ್ಭ ದುರ್ಘಟನ ನಡೆದಿದೆ ನಡೆದಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


