ಮೋಜು-ಮಸ್ತಿ ಮಾಡಲೆಂದು ಅತಿಯಾದ ವೇಗದಲ್ಲಿ ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ಐವರು ಯುವಕರು ಇನ್ ಸ್ಟಾಗ್ರಾಂ ಲೈವ್ ಹೋಗುತ್ತಾ ಕಾರನ್ನು ಪ್ರತಿ ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಾಯಿಸಿ ಕೊನೆಗೆ ಭೀಕರ ಅಪಘಾತಕ್ಕೀಡಾಗಿದ್ದಾರೆ.
ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಅಸುನೀಗಿದರೆ, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್ ನ ಕಛ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಹ್ಮದಾಬಾದ್‌ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್ ಟ್ರಿಪ್ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್‌ಸ್ಟಾಗ್ರಾಂ ಲೈವ್ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್‌ಸ್ಟಾಗ್ರಾಂನಲ್ಲಿ ಲೈವ್ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್ ಟೇಕ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ.
ಫುಲ್ ಎಂಜಾಯ್ ಮೂಡ್ ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೋರಾಗಿ ಮ್ಯೂಸಿಕ್ ಹಾಕಿಕೊಂಡು ಯುವಕನೋರ್ವ “ನೋಡಿ ನಮ್ಮ ಕಾರು ಎಷ್ಟು ವೇಗವಾಗಿ ಹೋಗುತ್ತಿದೆ” ಎಂದು ಹೇಳುತ್ತಾ ಸ್ಪೀಡೋ ಮೀಟರ್ ಅನ್ನು ತೋರಿಸುತ್ತಾನೆ. ಅದು ಪ್ರತಿಗಂಟೆಗೆ 160 ಕಿ.ಮೀ ವೇಗ ತೋರಿಸುತ್ತಿತ್ತು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


