ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಇಂದು ‘ಮಹಾನಾಯಕ’ ಬ್ಯಾನರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಕೊಟ್ಟಂತಹ ಸಂವಿಧಾನ ಬಡವರಿಗೆ ಅಸ್ಪಶ್ಯತರಿಗೆ ನಿರ್ಗತಿಕರಿಗೆ ಮಾತ್ರ ಕೊಟ್ಟಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೊಟ್ಟಿದ್ದು, ಅದನ್ನು ನಾವೆಲ್ಲರೂ ಅರ್ಥೈಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕಿದೆ ಎಂದು ಹೇಳಿದರು
ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು ಡಾ.ಬಾಬು ಜಗಜೀವನರಾಮ್ ಎಲ್ಲರೂ ನಮ್ಮ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಮತ್ತು ನಮ್ಮ ದೇಶದ ಬಹುತೇಕ ಹಳ್ಳಿಗಳಲ್ಲಿ ಸವರ್ಣೀಯರಿಂದ ಶೋಷಿತವರ್ಗದ ಮೇಲೆ ಇನ್ನೂ ಅಸ್ಪೃಶ್ಯತೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಕಾರ್ಯದರ್ಶಿ ರಾಜು, ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್, ಪ್ರಸನ್ನ, ಗಂಗಣ್ಣ, ಚಂದ್ರು ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ