ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಬಗ್ಗೆ ಹಲವು ದೂರುಗಳು ಬಂದ ಹಿನ್ನಲೆ, ಬೃಹತ್ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ದೇವದುರ್ಗ ತಾಲೂಕಿನ ಚಿಕ್ಕರಾಯಕುಂಪಿಯಲ್ಲಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20,033 ಮೆಟ್ರಿಕ್ ಟನ್ ನಷ್ಟು ಮರಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಮೀನು ಮಾಲೀಕರಾದ ಚಂದ್ರಮ್ಮ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಸುಮಾರು 1,58,26,070 ರೂ. ಮೊತ್ತದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


