ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆಸಿದ ದಾಳಿಯಲ್ಲಿ, ಒಬ್ಬ ಸಾಮಾನ್ಯ ಶೂ ವ್ಯಾಪಾರಿಯ ಮನೆಯಿಂದ 40 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಲವು ಅನುಮಾನಗಳು ಮೂಡಿದ್ದು, ಸದ್ಯ 40 ಕೋಟಿ ರೂ. ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜಪ್ತಿ ಮಾಡಿದ ಹಣವನ್ನು ಇನ್ನೂ ಎಣಿಕೆ ಮಾಡಲಾಗುತ್ತಿದ್ದು, ಹಣದ ಮೊತ್ತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್ ಡಂಗ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ದಾಖಲೆ ಇಲ್ಲದ 500 ರೂ. ನೋಟುಗಳ ಹಲವು ಬಂಡಲ್‌ಗಳನ್ನು ಹೊರತೆಗೆದಿದ್ದಾರೆ. ಇತ್ತೀಚೆಗೆ ದೇಶದಲ್ಲಿ ನಡೆದ 2ನೇ ಅತಿದೊಡ್ಡ ದಾಳಿಯೂ ಇದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


