ಕೆಲದಿನಗಳ ಹಿಂದೆ ಪುಟ್ಟ ಕಂದಮ್ಮವೊಂದು ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು, ಮತ್ತು ಆ ಮಗುವನ್ನು ರಕ್ಷಿಸಲಾಗಿತ್ತು. ಇದೀಗ ಆ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆಕಸ್ಮಿಕವಾಗಿ ತನ್ನ ಕೈಯಿಂದ ಜಾರಿ ಮಗು ಅಪಾರ್ಟ್ ಮೆಂಟ್ ಬಾಲ್ಕನಿಯಲ್ಲಿ ಬಿದ್ದ ಘಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ನಿಂದನೆ ವ್ಯಕ್ತವಾಗಿದ್ದರಿಂದ, ಮನನೊಂದು ಟೆಕ್ಕಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರಿನ ಕಾರಮಡೈಯಲ್ಲಿರುವ ತವರು ಮನೆಯಲ್ಲಿ ರಮ್ಯಾ ಸಾವನ್ನಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ. ತಾಯಿಯ ಕೈಯಿಂದ ಮಗು ಬಿತ್ತೆಂದು ವೈರಲ್ ವಿಡಿಯೋದಲ್ಲಿ ಹಲವರು ತಾಯಿಯನ್ನು ನಿಂದಿಸಿದ್ದರು ಎನ್ನಲಾಗಿದೆ. ಈ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ರಮ್ಯಾ ಚೆನ್ನೈನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಪತಿ ವೆಂಕಟೇಶ್ ಕೂಡ ಐಟಿ ಉದ್ಯೋಗಿ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾರನ್ನು ಪೋಷಕರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


