ಕರ್ನಾಟಕ ಪಬ್ಲಿಕ್ ಸ್ಕೂಲ್ ಬಗ್ಗೆ ನಮ್ಮ ಸರ್ಕಾರ ಬದ್ಧತೆ ಹೊಂದಿದೆ. ನೂರು ಶಾಲೆಗಳನ್ನು ಇಡೀ ರಾಜ್ಯಾದ್ಯಂತ ತೆರೆಯುತ್ತೇವೆ. ಮುಂದಿನ ಮೂರು ವರ್ಷಗಳಲ್ಲಿ 3,000 ಶಾಲೆ ತೆರೆಯುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್‍ಎಸ್‍ಎಲ್ ಸಿ ಪರೀಕ್ಷೆ ಗ್ರೇಸ್ ಮಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಅವರು. ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ. 20 ಗ್ರೇಸ್ ಮಾರ್ಕ್ ಯಾವತ್ತೂ ಇರುತ್ತಾ ಎಂದು ಹಲವರಿಗೆ ಸಂಶಯ ಇದೆ.
ಉಡುಪಿ, ದಕ್ಷಿಣ ಕನ್ನಡ ಯಾವತ್ತೂ ಟಾಪರ್ಸ್ ಆಗಿ ಇರುತ್ತಿದ್ದರು. ನಂತರ ರಿಸಲ್ಟ್ ನಲ್ಲಿ ಇಳಿಮುಖವಾಯಿತು. ಈಗ ಮತ್ತೆ ಉಡುಪಿ, ಮಂಗಳೂರು ಟಾಪರ್ಸ್ ಆಗಿದ್ದಾರೆ ಎಂದರು. ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ. ಗ್ರೇಸ್ ಮಾರ್ಕ್ ನೀಡಿರುವುದು ಈ ವರ್ಷಕ್ಕೆ ಮಾತ್ರ. ನಾವೀಗ ಎಲ್ಲಿದ್ದೇವೆ ಅನ್ನೋದು ಅರಿವಿಗೆ ಬಂದಿದೆ. ಇಲಾಖೆಯನ್ನು ಸಮರ್ಥವಾಗಿ ನಡೆಸಿಕೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ನೀಡಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


