nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ May 21, 2024

    ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ

    By adminMay 21, 2024No Comments2 Mins Read
    hubballi

    ಹುಬ್ಬಳ್ಳಿ: ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.
    ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ, ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

    ವಿಪಕ್ಷದವರು ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು.

    ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.

    ವಿಪಕ್ಷದವರು ನೇಹಾ ಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣಕಟ್ಟುವ ಪ್ರಯತ್ನ ಮಾಡಿದರು. ಅನೇಕರ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಮನಿಸಿದೆ. ಪ್ರಕರಣದ ಆರೋಪಿ ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಿದ ಎಂಬುದು ತನಿಖೆಯಿಂದ ಹೊರಬರಬೇಕಿದೆ. ಮೂಲಾಂಶವನ್ನು ತನಿಖೆಯಿಂದ ಹೊರತರಬೇಕು ಎಂಬುದು ನಮ್ಮ ಉದ್ದೇಶ. ಇಲಾಖೆ ಆ ಕೆಲಸವನ್ನು ಈಗಾಗಲೇ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ ಎಂದು ಹೇಳಿದರು.

    ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಯುವತಿಯ ಅಜ್ಜಿಯನ್ನು ಮಾತನಾಡಿಸಿದೆ. ದೂರು ಕೊಡಲು ಠಾಣೆಗೆ ಹೋಗಿರುವುದಾಗಿ ಹೇಳಿದರು. ಈ ವೇಳೆ ಅಲ್ಲಿ ಸರಿಯಾಗಿ ಸ್ಪಂದಿಸಿಲ್ಲ. ಅದಕ್ಕೆ ಬೇಸರ ಆಯ್ತು ಎಂದರು. ದೂರು ನೀಡಿದ ಕೂಡಲೇ ಕ್ರಮ ತೆಗೆದುಕೊಂಡಿದ್ದರೆ ಕೃತ್ಯ ಸಂಭವಿಸುತ್ತಿರಲಿಲ್ಲ ಎಂಬುದು ಗೊತ್ತಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಅದರ ವರದಿ ಬದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಯಾರೇ ತಪ್ಪೆಸಗಿದ್ದರು ಸುಮ್ಮನೆ ಬಿಡುವ ಪ್ರಮೇಯವಿಲ್ಲ ಎಂದು ಎಚ್ಚರಿಸಿದರು.

    ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರ ಅವಧಿಯಲ್ಲಿ 2021 ಜನವರಿ ತಿಂಗಳಿನಿಂದ ಏಪ್ರಿಲ್‌ವರೆಗೆ (4 ತಿಂಗಳ ಅಂಕಿ-ಅಂಶ) 499 ಕೊಲೆ ಪ್ರಕರಣಗಳು, 2022 ಜನವರಿಯಿಂದ ಏಪ್ರಿಲ್‌ವರೆಗೆ 466, 2023 ಜನವರಿಯಿಂದ ಏಪ್ರಿಲ್‌ವರೆಗೆ 431, 2024 ಜನವರಿಯಿಂದ ಏಪ್ರಿಲ್ವರೆಗೆ 430 ಕೊಲೆ ಪ್ರಕರಣಗಳು ವರದಿಯಾಗಿವೆ. ಈ ಅಂಕಿ-ಅಂಶಗಳನ್ನು ಗಮನಿಸಿದರೆ, ಯಾರ ಅವಧಿಯಲ್ಲಿ ಹೆಚ್ಚು ಕೊಲೆ ಪ್ರಕರಣಗಳು ವರದಿಯಾಗಿವೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.

    ಕಾನೂನು ಸುವ್ಯವಸ್ಥೆ ಸ್ಥಿರ:
    ಕೊಲೆ ಪ್ರಕರಣವನ್ನು ಆಧರಿಸಿ ರಾಜ್ಯದಲ್ಲಿ ಕಾನೂನಿ ಸುವ್ಯವಸ್ಥೆ ಕುಸಿದಿದೆ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ದುರುದ್ದೇಶದಿಂದ ಹೇಳಿಕೆ ನೀಡುತ್ತಿದ್ದಾರೆ ಎಂಬುದನ್ನು ಅಂಕಿ-ಅಂಶಗಳು ಹೇಳುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದರು.

    ನಮ್ಮ ಸರ್ಕಾರ ಬಂದನಂತರ ರಾಜ್ಯದ ಅನೇಕ ಕಡೆ ನಡೆದ ಗಣೇಶ ಉತ್ಸವ, ಹೋಳಿ ಹಬ್ಬ, ರಂಜಾನ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಿ ಇಲಾಖೆ ಕೆಲಸ ಮಾಡಿದೆ. ಲೋಲಸಭಾ ಚುನಾವಣೆಯ ರಾಜ್ಯದಲ್ಲಿ ನಡೆದ ಎರಡು ಹಂತಗಳಲ್ಲಿಯೂ ಸುರಕ್ಷಿತವಾಗಿ ಮತದಾನ ನಡೆಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

    ಪೆನ್ ಡ್ರೈವ್ ಪ್ರಕರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ. ನಮ್ಮ ಪೊಲೀಸರು ಸಮರ್ಥರಾಗಿದ್ದಾರೆ ಎಂದರು.

    ಕದ್ದಾಲಿಕೆಯಾಗಿದ್ದರೆ ದೂರು ನೀಡಲಿ:
    ಫೋನ್ ಟ್ಯಾಪಿಂಗ್ ಆಗಬೇಕಾದರೆ ಸರ್ಕಾರದ ಆದೇಶವಾಗಬೇಕಾಗುತ್ತದೆ. ಹೆಚ್.ಡಿ.ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಯಾಗಿದ್ದರೆ ದೂರು ನೀಡಲಿ. ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಮಾಡಿಸುತ್ತಿದೆ ಎಂಬುದಾದರೆ ದಾಖಲೆ ನೀಡಲಿ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.