ತುಮಕೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಅಂಚೆಪಾಳ್ಯದ ಮಂಜುನಾಥ್ ಎಂಬವರ ಬೈಕ್ ತಡೆದ ದುಷ್ಕರ್ಮಿಗಳು, ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಗೋವಿಂದ ಅಲಿಯಾಸ್ ಶೂಟೌಟ್ ಗೋವಿಂದ, ಅಕ್ಷಯ್, ನಾಗೇಶ್ ಎಂದು ಹೇಳಲಾಗಿದೆ.
ಅಂಚೆಪಾಳ್ಯ ಬಳಿ ಬೈಕ್ ಅಡ್ಡಗಟ್ಟಿ ಹೊಡೆದು ಹತ್ಯೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗೋವಿಂದನ ಬಗ್ಗೆ ಮಾತನಾಡುತ್ತೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಹಲ್ಲೆಯಿಂದಾಗಿ ಮಂಜುನಾಥ್ ಗೆ ಗಂಭೀರ ಗಾಯವಾಗಿದೆ. ಆತನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


