ಯಾದಗಿರಿ: ತಾಲೂಕಿನ ಅಬ್ಬೇತುಕುರ ಗ್ರಾಮದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸಿದ್ದಪ್ಪ(45) ಎಂಬುವವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.
ಕೂಡಲೇ ಕುಟುಂಬದವರು ಗಾಯಾಳುವನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ್ದಕ್ಕೆ ಕುಟುಂಬದವರು ಆಕ್ರೋಶ ಹೊರಹಾಕಿದ್ದಾರೆ. ಕೇವಲ ವೈದ್ಯಕೀಯ ಸಿಬ್ಬಂದಿಯಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾವು ಬದುಕಿನ ಮದ್ಯೆ ವ್ಯಕ್ತಿ ಹೋರಾಟ ನಡೆಸುತ್ತಿದ್ದಾರೆ. ಜಿಲ್ಲಾಸ್ಪತ್ರೆ ವಿರುದ್ಧ ಜನರು ಕಿಡಿಕಾರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


