ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಜರುಗಿದೆ. ಅಣ್ಣ-ತಂಗಿ ಇಬ್ಬರು ಅವಳಿ ಜವಳಿಯಾಗಿದ್ದಾರೆ. ಆದ್ರೆ, ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಅಶ್ಲೀಲ ವಿಡಿಯೋಗಳನ್ನು ವೀಕ್ಷಣ ಮಾಡಿದ್ದು, ಬಳಿಕ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ.
ಮನೆಯಲ್ಲಿ ಪೋಷಕರು ಇಲ್ಲದೇ ವೇಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದೀಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಿದ್ದರಿಂದ ಒಂದು ದಿನ ಬಾಲಕಿಗೆ ಹೊಟ್ಟೆ ನೋವು ಬಂದಿದೆ. ಕೂಡಲೇ ಬಾಲಕಿ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಗೆ ಹೋಗಿದ್ದಾಳೆ. ಆ ವೇಳೆ ವೈದ್ಯರು ಪರೀಕ್ಷಿಸಿದಾಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಕೂಡಲೇ ವೈದ್ಯರು, ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


