ಬೆಂಗಳೂರು ಗ್ರಾಮಾಂತರ: ಶಾರ್ಟ್‌ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಇ-ಪರಿಸರ ಕಾರ್ಖಾನೆಯಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಸ್ಕರಣಾ ಕೆಲಸ ನಡೆಯುತ್ತಿದ್ದಾಗಲೇ ಏಕಾಏಕಿ ಬೆಂಕಿ ಹೊತ್ತಿಕಂಡು ಧಗಧಗನೇ ಉರಿದಿದೆ.
ಇದರ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


