ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ರೋಚಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಆರ್ ಸಿ ಬಿ ತಂಡವನ್ನು ಸೋಲಿಸಿ 2ನೇ ಕ್ವಾಲಿಫಯರ್ ಪ್ರವೇಶಿಸಿತು. ಆ ಮೂಲಕ ಈ ಸಲವೂ ಆರ್ ಸಿ ಬಿ ಕಪ್ ನಿಂದ ವಂಚಿತವಾಯಿತು.
ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (45 ರನ್, 30 ಎಸೆತ, 8 ಬೌಂಡರಿ) ಹಾಗೂ ರಿಯಾನ್ ಪರಾಗ್( 36 ರನ್, 26 ಎಸೆತ, 2 ಬೌಂಡರಿ, 2 ಸಿಕ್ಸರ್)ಸಾಂದರ್ಭಿಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಬುಧವಾರ ನಡೆದ ಐಪಿಎಲ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ವಿಕೆಟ್ ಅಂತರದಿಂದ ಮಣಿಸಿತು.
ಈ ಫಲಿತಾಂಶದೊಂದಿಗೆ ರಾಜಸ್ಥಾನ ತಂಡ ಮೇ 24ರಂದು ಚೆನ್ನೈನಲ್ಲಿ ನಡೆಯುವ 2ನೇ ಕ್ವಾಲಿಫೈಯರ್ ನಲ್ಲಿ ಆಡಲು ಅರ್ಹತೆ ಪಡೆದಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಸೋಲಿನೊಂದಿಗೆ ಆರ್ ಸಿಬಿ ಟೂರ್ನಿಯಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿದೆ.
ಸಂಕ್ಷಿಪ್ತ ಸ್ಕೋರ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು: 20 ಓವರ್ ಗಳಲ್ಲಿ 172/8
(ರಜತ್ ಪಾಟಿದಾರ್ 34, ವಿರಾಟ್ ಕೊಹ್ಲಿ 33, ಮಹಿಪಾಲ್ ಲಾಮ್ರೊರ್ 32, ಗ್ರೀನ್ 27, ಅವೇಶ್ ಖಾನ್ 3-44, ಅಶ್ವಿನ್ 2-19, ಬೌಲ್ಟ್ 1-16)
ರಾಜಸ್ಥಾನ ರಾಯಲ್ಸ್: 19 ಓವರ್‌ಗಳಲ್ಲಿ 174/6
(ಯಶಸ್ವಿ ಜೈಸ್ವಾಲ್ 45, ರಿಯಾನ್ ಪರಾಗ್ 36, ಶಿಮ್ರೊನ್ ಹೆಟ್ಮೆಯರ್ 26, ಮುಹಮ್ದಮ್ ಸಿರಾಜ್ 2-33)
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


