ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296