nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ
    ತುಮಕೂರು May 23, 2024

    ಮುಖ್ಯಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ

    By adminMay 23, 2024No Comments3 Mins Read
    dc meeting
    • ಜಿಲ್ಲೆಯ ಬರ ನಿರ್ವಹಣೆ, ಪೂರ್ವ ಮುಂಗಾರು ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    ತುಮಕೂರು:  ರಾಜ್ಯದಲ್ಲಿನ ಬರಪರಿಸ್ಥಿತಿ, ಪೂರ್ವ–ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗವಹಿಸಿ ಜಿಲ್ಲೆಯ ಬರಪರಿಸ್ಥಿತಿ, ಮುಂಗಾರು ಋತುಮಾನ ಪರಿಸ್ಥಿತಿ ಹಾಗೂ ಮಳೆಯಿಂದ ಉಂಟಾದ ಹಾನಿ ಬಗ್ಗೆ ಮಾಹಿತಿ ನೀಡಿದರು.

    ರಾಜ್ಯದಲ್ಲಿಯೇ ಅತಿ ಹೆಚ್ಚು 20 ಮೇವಿನ ಬ್ಯಾಂಕ್‌ ಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ಬರ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ ಮೇ, 2024ರ  ಮಾಹೆಯಲ್ಲಿ , ಮೇ 21 ದಿನಾಂಕ ವರೆಗೂ  94 ಮಿ.ಮೀ. ವಾಡಿಕೆ ರೀತ್ಯಾ ಮಳೆಯಾಗಬೇಕಿದ್ದು, 150.9 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕಗಳ ಸಂಗ್ರಹ ಇದ್ದು,    ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ  ವಿತರಣೆಗಾಗಿ 50 ರೈತ ಸಂಪರ್ಕ ಕೇಂದ್ರಗಳಿದ್ದು, ಪ್ರಸ್ತುತ ವರ್ಷ ಹೆಚ್ಚುವರಿಯಾಗಿ 11 ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸರಬರಾಜು ಸಂಸ್ಥೆಗಳಲ್ಲಿ 52,000 ಕ್ವಿಂಟಾಲ್ ಬಿತ್ತನೆ ಬೀಜಗಳ ಸಂಗ್ರಹವಿದ್ದು, ಇಲ್ಲಿಯವರೆಗೂ 284 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು  ರೈತರಿಗೆ ವಿತರಿಸಲಾಗಿದೆ, ಆಧಾರ್ ಸೀಡಿಂಗ್ ಮತ್ತಿತರ ಸಮಸ್ಯೆ ಕಾರಣ ಕೆಲವು ರೈತರಿಗೆ ಬರ ಪರಿಹಾರ ವಿತರಣೆ ಬಾಕಿ ಇತ್ತು. ಇದರಲ್ಲಿ ಬಹುತೇಕ ಸಮಸ್ಯೆ ಬಗೆಹರಿಸಿ ಎಲ್ಲಾ ಅರ್ಹ ರೈತರಿಗೆ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.


    Provided by
    Provided by

    ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು.  ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತಿಯಿಂದ ಸಡಿಲಿಕೆ ನೀಡಿರುವುದರಿಂದ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಬಿತ್ತನೆ ಬೀಜಕ್ಕೆ ಜನ ಹೆಚ್ಚು ಸಮಯ ಕ್ಯೂ ನಿಲ್ಲುವುದು ತಪ್ಪಿಸಿ,  ರೈತರಿಂದ ದೂರು ಬಾರದಂತೆ  ಬೇಡಿಕೆಯನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಿ, ಎಲ್ಲಿಯೂ ಕೊರತೆಯಾಗದಂತೆ  ಕ್ರಮ ವಹಿಸುವಂತೆ   ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚಿಸಿದರು.

    ಕುಡಿಯುವ ನೀರಿನ ಶುದ್ಧತೆ ಪರೀಕ್ಷಿಸಿ:

    ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮಳೆಯ ನೀರು ಶುದ್ಧ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುವ ಸಾಧ್ಯತೆಯಿದ್ದು, ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಲ್ಲಿ ಆ ನೀರನ್ನು ಸೇವಿಸುವ ಜನರು ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವ್ಯಾಪ್ತಿಯಲ್ಲಿರುವ 11,150  ಜಲಮೂಲಗಳು ಸೇರಿದಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಎಲ್ಲಾ ಜಲಮೂಲಗಳ ಶುದ್ಧತೆಯನ್ನು ಪರೀಕ್ಷಿಸಿ ನೀರು ಕುಡಿಯಲು ಯೋಗ್ಯವಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರನ್ನು ಪೂರೈಸುವಂತೆ  ಸಂಬಂಧಿಸಿದವರಿಗೆ ಸೂಚಿಸಿದರು. ಆರೋಗ್ಯ ಇಲಾಖೆಯು ಈಗಿನಿಂದಲೆ ಪೂರ್ವ ಸಿದ್ದತೆ ಮಾಡಿಕೊಂಡು, ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕೆಂದು ನಿರ್ದೇಶನ ನೀಡಿದರು.

     ರೈತರು ಆತಂಕ ಪಡುವ ಅಗತ್ಯವಿಲ್ಲ:

    ಜಿಲ್ಲೆಯಲ್ಲಿ 52,217 ಕ್ವಿಂಟಾಲ್ ಬಿತ್ತನೆ ಬೀಜವು ಸರಬರಾಜು ಸಂಸ್ಥೆಗಳಲ್ಲಿ ಸಂಗ್ರಹವಿದ್ದು,   50,363 ಮೆ.ಟನ್ ರಸಗೊಬ್ಬರದ ಸಂಗ್ರಹವಿದೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ರೈತರಿಗೆ ತ್ವರಿತವಾಗಿ  ಬಿತ್ತನೆ ಬೀಜ ಮತ್ತು ರಸಗೋಬ್ಬರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಹಾಗೂ ರೈತರಿಗೆ ಅಗತ್ಯವಿದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಜುಲೈ–2024 ಅಂತ್ಯದವರೆಗೂ ವಿತರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೊಳಗಾಗದೆ ತಮಗೆ ಅಗತ್ಯವಿರುವಷ್ಟು ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಸಚಿವರ ಮೆಚ್ಚುಗೆ :

    ರಾಜ್ಯದಲ್ಲಿ 2,312 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಈ ಬಾರಿ ಕಂಡು ಬಂದಿದ್ದು, ಅದರಲ್ಲಿ 1,700 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ, 500 ಗ್ರಾಮಗಳಿಗೆ ಟ್ಯಾಂಕರ್‌ ಗಳ ಮೂಲಕ, ಉಳಿದ ಗ್ರಾಮಗಳಲ್ಲಿ ಹಳೆಯ ಕೊಳವೆ ಬಾವಿ ನವೀಕರಣ ಹಾಗೂ ಹೊಸ ಕೊಳವೆ ಬಾವಿ ಕೊರೆಸುವ ಮೂಲಕ ಸಮರ್ಪಕವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ.  ರಾಜ್ಯಾದ್ಯಂತ ಅಗತ್ಯವಿರುವ ಕಡೆ ಮೇವಿನ ಬ್ಯಾಂಕ್‌ಗಳನ್ನು ಸ್ಥಾಪಿಸಿ ರೈತರ ಕಷ್ಟಕ್ಕೆ ಸ್ಪಂದಿಸಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಈ ಬಾರಿ ಪ್ರಾರಂಭದಲ್ಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

    ವಿಡಿಯೋ ಸಂವಾದದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಯೋಜನೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಭಾಗಿಯಾಗಿದ್ದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ. ಕರಾಳೆ, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಉಪವಿಭಾಗಾಧಿಕಾರಿಗಳಾದ ಸಪ್ತಶ್ರೀ, ಗೌರವ ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ಕೃಷಿ ಇಲಾಖೆ ಜಂಟಿನಿರ್ದೇಶಕ ರಮೇಶ್ ಎನ್.,  ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.