ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಗೋಮಾಳ ಜಮೀನು ಅನಧಿಕೃತವಾಗಿ ಒತ್ತುವರಿ ಮಾಡಲಾಗಿದ್ದನ್ನು ತೆರವು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ದೊಡ್ದಬಳ್ಳಾಪುರ ನಿವಾಸಿ ರಾಮು ನೇರಳಗಟ್ಟ ಮತ್ತು ಎಚ್.ಕಾಂತರಾಜು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಆರ್ ಕೃಷ್ಣ ಕುಮಾರ್ ಹಾಗೂ ಡಿ. ರಾಮಚಂದ್ರ ಹುದ್ದಾರ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೇ ನಂ 57, 58 ಮತ್ತು 60ರ ಸರ್ಕಾರಿ ಗೋಮಾಳ ಜಮೀನಿನನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ.
ಜಾಗದ ಸುತ್ತಲೂ ಸಿಮೆಂಟ್ ಕಾಂಪೌಂಡ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಕೂಲಿ ಕಾರ್ಮಿಕರು ಬಿಟ್ಟು ಕೆಲಸ ಮಾಡಿಸುತ್ತಿದ್ದಾರೆ.ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ಸೇರಬೇಕಾದ 30 ರಿಂದ 40 ರ ಎಕರೆಯನ್ನು ಭೂಗಳ್ಳರಿಂದ ರಕ್ಷಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಪೀಠದ ಮುಂದೆ ಮನವಿ ಮಾಡಿದರು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ರಾಜ್ಯ ಸರ್ಕಾರ, ಬೆಂಗಳೂರು ಗ್ರಾಮಂತರ ಜಿಲ್ಲಾ ಉಪ ಆಯುಕ್ತರು, ದೊಡ್ಡಬಳ್ಳಾಪುರ ತಾಲೂಕು ಸಹಾಯಕ ಕಮಿಷನರ್, ತಹಶಿಲ್ದಾರ್ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜೂ.10 ಕ್ಕೆ ಮುಂದೂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


