ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಕಾಲೇಜಿನ ಪ್ರೇಮಾಂಕುರದ ಕಹಾನಿಯನ್ನು ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.
ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಎಂದು ಹೇಳಿದ ಅವರು ಈ ಮೂಲಕ ವಿದ್ಯಾರ್ಥಿ ಜೀವನದಲ್ಲಿನ ಪ್ರೇಮಾಂಕುರವನ್ನು ಹಂಚಿಕೊಂಡಿದ್ದಾರೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ. ಅವರ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿದರು. ಇದರೊಂದಿಗೆ ಪರೋಕ್ಷವಾಗಿ ಕಾಲೇಜು ದಿನಗಳಲ್ಲಿ ಓರ್ವ ಹುಡುಗಿಯನ್ನು ಇಷ್ಟಪಟ್ಟಿರುವುದನ್ನು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


