nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತರ ಕನ್ನಡ ಜಿಲ್ಲೆ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
    ರಾಜ್ಯ ಸುದ್ದಿ May 24, 2024

    ಉತ್ತರ ಕನ್ನಡ ಜಿಲ್ಲೆ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

    By adminMay 24, 2024No Comments2 Mins Read
    uttara kannada

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಿ, ಜಿಲ್ಲೆಯನ್ನು ಬಾಲ ಕಾರ್ಮಿಕ ಪದ್ದತಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

    ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ, ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಜಿಲ್ಲೆಯಲ್ಲಿ 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ/ಕೈಗಾರಿಕೆಗಳಲ್ಲಿ ಹಾಗೂ ಅಪಾಯಕಾರಿ ಅಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಲ್ಲಿ ಅಂತಹ ಮಕ್ಕಳನ್ನು ಅಲ್ಲಿಂದ ಮುಕ್ತಗೊಳಿಸಿ, ಅವರಿಗೆ ವಿದ್ಯಾಭ್ಯಾಸ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಕಾರ್ಮಿಕ ಇಲಾಖೆ, ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಇನ್ನಷ್ಟು ಸಂಘಟಿತವಾಗಿ, ಪರಿಣಾಮಕಾರಿಯಗಿ ಕಾರ್ಯನಿರ್ವಹಿಸಬೇಕು ಎಂದರು.

    ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮತ್ತು ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವವರಿಗ ನೀಡುವ ಶಿಕ್ಷೆಯ ಪ್ರಮಾಣ ಮತ್ತು ದಂಡದ ಕುರಿತಂತೆ ಎಲ್ಲಾ ಕೈಗಾರಿಕೆಗಳು, ಹೋಟೆಲ್ಗಳ ಮಾಲೀಕರಿಗೆ ಮತ್ತು ಉದ್ದಿಮೆದಾರರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಈ ಬಗ್ಗೆ ಸಾರ್ವಜನಿಕ ಸ್ಥಳಗಳಲ್ಲಿ ಸೂಕ್ತ ಪ್ರಚಾರ ಫಲಕಗಳನ್ನು ಅಳವಡಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

    uttara kannada

    ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಜಿಲ್ಲೆಯಲ್ಲಿ ಈಗಾಗಲೇ ನೇಮಿಸಲಾಗಿರುವ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆಗಳನ್ನು ನಡೆಸಿ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಬಸ್ ಮತ್ತು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುವ ಮಕ್ಕಳಿಗೆ ಸೂಕ್ತ ಪುರ್ನವಸತಿ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

    ಬಾಲ ಕಾರ್ಮಿಕರು ಪತ್ತೆಯಾದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ದ ಕಾನೂನಿನನ್ವಯ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪತ್ತೆಯಾದ ಬಾಲ ಕಾರ್ಮಿಕರಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ದೊರೆಯುವಂತೆ, ವಸತಿ ಶಾಲೆಗಳಿಗೆ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಿ ಎಂದರು.

    ಪ್ರಸ್ತುತ ಶಾಲಾರಂಭವಾಗಲಿದ್ದು, ಈ ಸಮಯದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರ್ಪಡೆ ಮಾಡಬೇಕು ಇಲ್ಲವಾದಲ್ಲಿ ಅವರು ಬಾಲ ಕಾರ್ಮಿಕರಾಗುವ ಸಾಧ್ಯತೆ ಅಧಿಕವಾಗಿದ್ದು ಈ ಕುರಿತಂತೆ ಕಾರ್ಮಿಕ ಇಲಾಖೆಯ ನಿರೀಕ್ಷಕರುಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

    ಜಿಲ್ಲೆಯಲ್ಲಿ ಎಪ್ರಿಲ್ 23 ರಿಂದ ಮಾರ್ಚ್ 24 ರ ವರೆಗೆ 2,631 ತಪಾಸಣೆಗಳನ್ನು ನಡೆಸಿದ್ದು, ಯಾವುದೇ ಬಾಲ ಕಾರ್ಮಿಕರು ಪತ್ತೆಯಾಗಿರುವುದಿಲ್ಲ ಆದರೆ 9 ಮಂದಿ ಕಿಶೋರ ಕಾರ್ಮಿಕರು ಪತ್ತೆಯಾಗಿದ್ದು, ಅಂತಹ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಸಹಾಯಕ ಪೊಲೀಸ್ ಅಧೀಕ್ಷಕ ಜಯಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿ ವೀಣಾ ಮಾಸ್ತಿ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.