ದಾವಣಗೆರೆ: ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು ಠಾಣೆಗೆ ನುಗ್ಗಿ ವಸ್ತುಗಳನ್ನ ಸಂಬಂಧಿಕರ ಧ್ವಂಸಗೊಳಿಸಿದ ಘಟನೆ ಜರುಗಿದೆ. ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್(30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್ ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಇದೀಗ ಅದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಆಕ್ರೋಶಗೊಂಡಿದ್ದಾರೆ. ಸಾವನ್ನಪ್ಪಿದ ಅರೋಪಿ ಸಂಬಂಧಿಕರನ್ನು ಚನ್ನಗಿರಿ ಡಿವೈಸ್ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಸದ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸಂಬಂಧಿಕರು ಆಕ್ರೋಶಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


