ಲಕ್ನೋ: ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಕಲ್ಲು ಬಂಡೆ ತುಂಬಿದ್ದ ಟ್ರಕ್ಕೊಂದು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲಾ ಬೈಪಾಸ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಹಜಾನ್ ಪುರದ ಧಾಬಾದಲ್ಲಿ ನಿಂತಿತ್ತು. ಕಲ್ಲು ಬಂಡೆ ತುಂಬಿದ್ದ ಟ್ರಕ್ ಬಸ್ ಗೆ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


