ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕ್ಯಾಪಿಟಲ್ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ವಿರುದ್ಧ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು, ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ದಂಪತಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್ ನಲ್ಲಿ ಒಂದು ಆಫೀಸ್ ಮಾಡಿಕೊಂಡು 1 ಲಕ್ಷ ಕೊಟ್ರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು. ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.
ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


