ಚಾಮರಾಜನಗರ: ಕಲುಷಿತ ನೀರು ಕುಡಿದು 15 ಜನರು ಅಸ್ವಸ್ಥರಾದ ಮಧುವಿನಹಳ್ಳಿ ಗ್ರಾಮಕ್ಕೆ, ಚಾಮರಾಜನಗರ ಜಿಲ್ಲಾಧಿಕಾರಿ ಟಿ. ಶಿಲ್ಪಾನಾಗ್ ರವರು ಭೇಟಿ ನೀಡಿ ಅನಾರೋಗ್ಯಕ್ಕೆ ಒಳಗಾದ ಗ್ರಾಮಸ್ಥರ ಅರೋಗ್ಯ ವಿಚಾರಿಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಲೇಗಾಲ ತಾಲೂಕಿನ ಮಧುವಿನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಕೆಲವರು ಅಸ್ವಸ್ಥಗೊಂಡಿದ್ದರು.
ಈ ಹಿನ್ನಲೆಯಲ್ಲಿ ಭಾನುವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಸಿಬ್ಬಂಧಿಗಳ ಜೊತೆಗೂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧುವಿನಹಳ್ಲಿ ಗ್ರಾಮಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಮಧುವಿನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಹಲವರು ಸರ್ಕಾರಿ ಆಸ್ಪತ್ರೆಗೆ ಹಾಗೂ ಕೆಲವರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಬಹುತೇಕರು ಡಿಸ್ಚಾಜ್೯ ಆಗಿದ್ದಾರೆ ಎಂದರು.
ಗ್ರಾಮದಲ್ಲಿ ಎರಡು ಬೋರ್ ವೆಲ್ ಗಳು ಇದ್ದು ಉಪ್ಪಿನ ಅಂಶ ಇರುವ ಕಾರಣ ಮತ್ತು ಸತತ ಮಳೆಯ ಕಾರಣರಿಂದ, ಆ ಎರಡೂ ಬೋರ್ವವೆಲ್ ಗಳಲ್ಲಿನ ನೀರು ಕಲುಷಿತಗೊಂಡು ಕುಡಿಯಲು ಯೋಗ್ಯವಾಗಿರುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಜಿಲ್ಲಾಡಳಿತದಿಂದ ಟ್ಯಾಂಕರ್ ಮೂಲಕ ಜನರಿಗೆ ಕುಡಿಯಲು ನೀರನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು. ಟೌನ್ ಶಿಪ್ ರಸ್ತೆ ಅಭಿವೃದ್ದಿ ಕಾಮಗಾರಿ ವೇಳೆ ನೀರಿನ ಪೈಪ್ ಲೈನಿಗೆ ತೊಡಕಾಗಿದೆ.
ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಲಾಗಿದೆ. ಅಲ್ಲದೆ ಕಳೆದ ಆರೆಂಟು ತಿಂಗಳಿಂದ ಗ್ರಾಮಪಂಚಾಯ್ತಿ ಪಿಡಿಓ ತಾ.ಪಂ.ಇಓ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸತತವಾಗಿ ಸಭೆ ನಡೆಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ರೀತಿಯ ಅನಾರೋಗ್ಯಕ್ಕೆ ಒಳಗಾದರೆ ಜನರು ಭಯಪಡಬೇಡಿ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಸಲಹೆ ಹಾಗು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


