ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದ ಮತ್ತು ಗೌತಮ್ ಗಂಭೀರ್ ಮಾರ್ಗದರ್ಶನದ ಕೆಕೆಆರ್ ತಂಡ ಭಾನುವಾರ ನಡೆದ ಫೈನಲ್ ನಲ್ಲಿ 2016ರ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಅನ್ನು 8 ವಿಕೆಟ್ ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಕೋಲ್ಕತ್ತಾ, ಐಪಿಎಲ್ ಫೈನಲ್ ನಲ್ಲಿ ಹೈದರಾಬಾದ್ ತಂಡವನ್ನು 18.3 ಓವರ್‌ಗಳಲ್ಲಿ 113 ರನ್ ಗಳ ಕನಿಷ್ಠ ಸ್ಕೋರ್ ಗೆ ಆಲೌಟ್ ಮಾಡಿ ನಂತರ 10.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 114 ರನ್ ಬಾರಿಸಿ ಪ್ರಶಸ್ತಿ ಗೆದ್ದುಕೊಂಡಿತು.
114 ರನ್ ಗಳ ಅಲ್ಪ ಮೊತ್ತದ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಗೆ ಉತ್ತಮ ಆರಂಭ ಸಿಗಲಿಲ್ಲ. ಸುನಿಲ್ ನರೈನ್ ತಮ್ಮ ಇನ್ನಿಂಗ್ಸ್ ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿ ಎರಡನೇ ಎಸೆತದಲ್ಲಿ ಔಟಾದರು. ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ನರೈನ್ ಅವರ ಬ್ಯಾಟ್ ಮತ್ತೊಮ್ಮೆ ಮೌನವಾಗಿತ್ತು. ಆ ನಂತರ ರಹಮಾನುಲ್ಲಾ ಗುರ್ಬಾಜ್ ಒಂದು ತುದಿಯಿಂದ ದೃಢವಾಗಿ ನಿಂತರು. ಇನ್ನೊಂದು ತುದಿಯಲ್ಲಿ ವೆಂಕಟೇಶ್ ಅಯ್ಯರ್ ಅಜೇಯ 52 ರನ್ ಬಿರುಸಿನ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿದರು.
ಗುರ್ಬಾಜ್ ಮತ್ತು ಅಯ್ಯರ್ ಜೋಡಿಯು ಪವರ್‌ಪ್ಲೇ ಓವರ್‌ಗಳಲ್ಲಿ ತಂಡದ ಸ್ಕೋರ್ ಅನ್ನು ಒಂದು ವಿಕೆಟ್‌ಗೆ 72 ರನ್‌ಗಳಿಗೆ ಕೊಂಡೊಯ್ದರು. 32 ಎಸೆತಗಳಲ್ಲಿ 39 ರನ್ ಗಳಿಸಿದ ಗುರ್ಬಾಜ್ 9ನೇ ಓವರ್‌ನಲ್ಲಿ ಔಟಾದರು.
ಆದರೆ ಸ್ಕೋರ್ ಬೋರ್ಡ್‌ನಲ್ಲಿ ಇಷ್ಟು ರನ್ ಗಳು ದಾಖಲಾಗಿದ್ದರಿಂದ ಕೆಕೆಆರ್ ನ ಗೆಲುವು ಖಚಿತವಾಗಿತ್ತು. ಅಂತಿಮವಾಗಿ, 11ನೇ ಓವರ್ ನಲ್ಲಿ ಮೂರು ಸಿಂಗಲ್ಸ್ ಗಳನ್ನು ತೆಗೆದುಕೊಳ್ಳುವ ಮೂಲಕ, KKR ಬ್ಯಾಟ್ಸ್ ಮನ್ ಗಳು 8 ವಿಕೆಟ್ ಗಳಿಂದ ತಮ್ಮ ಗೆಲುವನ್ನು ಖಚಿತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


