nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೆಹರೂ ಅವರಿಗೆ ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಷ್ಟ್ರೀಯ ಸುದ್ದಿ May 27, 2024

    ನೆಹರೂ ಅವರಿಗೆ ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminMay 27, 2024No Comments3 Mins Read
    siddharamayya

    ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

    KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು.

    ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸ ಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ವಿವರಿಸಿದರು.

    ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟುಗಳು ಆಗಿದ್ದು ನೆಹರೂ ಅವಧಿಯಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೂ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ ಎಂದು ಪ್ರಶ್ನಿಸಿದರು.

    ನೆಹರೂ ಮತ್ತು ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಾ ಜೈಲು ವಾಸ ಅನುಭವಿಸುತ್ತಿದ್ದಾಗ ಆರ್ ಎಸ್ ಎಸ್ ಮತ್ತು ಸಂಘ ಪರಿವಾರ ಬ್ರಿಟೀಷರ ವಿರುದ್ಧ ನೆಪಕ್ಕೂ ಸೊಲ್ಲೆತ್ತಲಿಲ್ಲ. ಇವರು ಈಗ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಇರುವ ನಮಗೆ ದೇಶಭಕ್ತಿಯ ಪಾಠ ಮಾಡುತ್ತಾ ನಗೆಪಾಟಲಿಗೀಡಾಗಿದ್ದಾರೆ ಎಂದರು.

    ಮೋದಿಗೆ ಸೋಲು ಖಚಿತವಾಗಿದೆ: ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು.

    ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದರು.

    ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ. ಸಂವಿಧಾನದ ಆಶಯಗಳಲ್ಲಿ ದೇಶವನ್ನು ಮುನ್ನಡೆಸುವುದು ಕಾಂಗ್ರೆಸ್ ಪಕ್ಷ ಮಾತ್ರ. ನೆಹರೂ, ಇಂದಿರಾಗಾಂಧಿ ಅವಧಿಯಲ್ಲಿ ಭೂ ಸುಧಾರಣೆ ಮಾಡಿದರು‌. ಕೈಗಾರಿಕೆಗಳನ್ನು ಸ್ಥಾಪಿಸಿದರು. ಈಗ ಬಿಜೆಪಿ ಇದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದೆ. ರೈತರಿಂದ ಭೂಮಿ ಕಿತ್ತುಕೊಳ್ಳುವುದು, ದೇಶದ ಕೈಗಾರಿಕೆಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಬಿಜೆಪಿಯ ಸಾಧನೆಯಾಗಿದೆ ಎಂದರು.

    ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು.

    ತಮ್ಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು‌. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು.

    ನಮ್ಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ.

    ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೀವಿ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು.

    ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್, ಮಂಜುನಾಥ್ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.