ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೋಲಿಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದವರಿಗೆ, ಸರ್ಕಾರದಿಂದ ನೀಡಲಾದ ಸವಲತ್ತುಗಳನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ವಿಚಾರವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಚನ್ನಗಿರಿಯಲ್ಲಿ ಬಾಂಧವರ ಗುಂಪೊಂದು ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದೆ. ಪೊಲೀಸ್ ವಾಹನಗಳಿಗೆ ಬೆಂಕಿ ಇಟ್ಟಿದೆ. ಈ ಘಟನೆ ಅವರ ಮನಃಸ್ಥಿತಿ ಎಂತದ್ದು ಎಂಬುದು ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದವರ ಮೇಲೆ ಕೇಸ್ ದಾಖಲಿಸಬೇಕು. ಸರ್ಕಾರಕ್ಕೆ ನಷ್ಟ ಮಾಡಿರುವ ಅಷ್ಟು ವೆಚ್ಚವನ್ನು ಅವರಿಂದ ಭರಿಸಬೇಕು. ಅಲ್ಲದೇ, ಸ್ಥಳೀಯ ಡಿವೈಎಸ್ ಪಿ ಮನವಿ ಮಾಡಿದರೂ ಸಹ ಚದುರದ ಗುಂಪಿನ ಮುಖ್ಯಸ್ಥ ಹಾಗೂ ಪ್ರಚೋದನೆ ಮಾಡಿದವರ ಮೇಲೆ ಕೇಸ್ ದಾಖಲಿಸಬೇಕು. ಅವರಿಗೆ ಸರ್ಕಾರ ನೀಡಿರುವ ಎಲ್ಲಾ ರೀತಿಯ ಸವಲತ್ತನ್ನು ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


