ಸರಗೂರು: ಸಾರ್ವಜನಿಕರೇ ಎಚ್ಚರಗೊಳ್ಳಿ. ಬುದ್ದಿವಂತರಾಗಿ ಸೊಳ್ಳೆಗಳ ಕಡಿತದಿಂದ ಸ್ವಯಂ ರಕ್ಷಣೆ ಪಡೆಯಿರಿ. ಮನೆಯ ಸುತ್ತು-ಮುತ್ತ ನೀರು ನಿಲ್ಲದಂತೆ ಸ್ವಚ್ಚತೆ ಕಾಪಾಡಿ ಎಂದು ಆರೋಗ್ಯಾಧಿಕಾರಿ ಡಾ.ಟಿ ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರದಂದು ಕಚೇರಿ ಮುಂಭಾಗದಲ್ಲಿ, ಹೆಚ್.ಡಿ. ಕೋಟೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಸರಗೂರು ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನ ಜಾಗೃತಿ ಜಾಥಾ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎಸ್ ಎಸ್ ಮಂಜುನಾಥ್ ರವರು ಹಸಿರು ನಿಶಾನೆ ತೋರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚು ಕಂಡು ಬಂದಿದ್ದು, ಸಾರ್ವಜನಿಕರು ಜಾಗೃತಿವಹಿಸಬೇಕು. ನಾಗರೀಕರ ಜಾಗೃತಿಗಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಮಾರ್ಗದರ್ಶನ ಚಾಚು ತಪ್ಪದೇ ಪಾಲಿಸಿ ಡೆಂಗ್ಯೂ ಜ್ವರ ನಿಯಂತ್ರಿಸಿರಿ ಎಂದರು.
ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದೇಶದಲ್ಲಿ ಪ್ರತಿ ವರ್ಷ ‘ಮೇ 16ರಂದು ರಾಷ್ಟ್ರೀಯ ಡೆಂಗ್ಯೂ ದಿನ’ ಎಂದು ಆಚರಿಸಲಾಗುತ್ತದೆ.
ಡೆಂಗ್ಯೂ ರೋಗ ಬರುವುದು ಹೇಗೆ?:
ಸೊಳ್ಳೆ ಕಡಿತದಿಂದ ಡೆಂಗ್ಯೂ ರೋಗ ಬರುತ್ತದೆ. ಹೆಣ್ಣು ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ವೈರಸ್ ಸೋಂಕು ಹರಡುತ್ತದೆ. ರಕ್ತನಾಳಗಳಿಗೆ ಈ ವೈರಸ್ ಹಾನಿಯುಂಟು ಮಾಡುತ್ತದೆ, ಜತೆಗೆ ರಕ್ತಕಣಗಳ ಸಂಖ್ಯೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ಇಳಿಕೆಯಾಗಿ ಅಂಗಾಂಗ ವೈಫಲ್ಯ ಮತ್ತು ಕೆಲವೊಮ್ಮೆ ಜೀವಕ್ಕೂ ಸಂಚಕಾರ ತರಬಹುದು.
ಲಕ್ಷಣಗಳು:
ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಂಡು ನೋವು ಉಂಟಾಗುವುದು, ಕೈ–ಕಾಲುಗಳಲ್ಲಿ ಸೆಳೆತ, ನೋವು, ಆಯಾಸ ಉಂಟಾಗಬಹುದು.
ತಡೆಯುವುದು ಹೇಗೆ?:
ಪ್ರಮುಖವಾಗಿ ಡೆಂಗ್ಯೂ ಜ್ವರ ಸೊಳ್ಳೆ ಕಡಿತದಿಂದ ಉಂಟಾಗುತ್ತದೆ ಮತ್ತು ಹರಡುತ್ತದೆ. ಹೀಗಾಗಿ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರು ಶೇಖರಣೆಯಾಗುವ ಯಾವುದೇ ಪ್ರದೇಶವಿದ್ದರೂ, ಶುಚಿಗೊಳಿಸುವುದು ಅಗತ್ಯ. ಜತೆಗೆ, ಮನೆ, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಸೊಳ್ಳೆ ನಿವಾರಕ ಬಳಕೆಯೂ ಸೂಕ್ತವಾಗಿದೆ ಎಂದು ಜಾಥಾ ಮೂಲಕ ತಿಳಿಸಿ ಕೊಟ್ಟರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್ ಎಸ್ ಮಂಜುನಾಥ್ ಮಾತನಾಡಿ, ಆರೋಗ್ಯ ಇಲಾಖೆ, ಎನ್ ಜಿಒಗಳ ಮೂಲಕ ಡೆಂಗ್ಯೂ ರೋಗ, ಅದರ ಲಕ್ಷಣಗಳು, ಚಿಕಿತ್ಸಾ ವಿಧಾನ ಕುರಿತು ಜನರಿಗೆ ಅರಿವು ಮೂಡಿಸಲಾಗುತ್ತದೆ.
ಬೇಸಿಗೆಯ ಕೊನೆಯಲ್ಲಿ ಮತ್ತು ಮಳೆಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತವೆ. ಹೀಗಾಗಿ ಈ ಕುರಿತು ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಪಾರ್ಥಸಾರಥಿ, ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಸರಳ, ನಾಗೇಂದ್ರ ರವಿರಾಜ್, ವರ್ಗದವರಾದ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರಾದ ನಾಗೇಂದ್ರ ರವಿರಾಜ್ , ಸುನೀಲ್, ಪುಷ್ಪ, ಶಾಂತಿ, ಜಗದೀಶ್, ನಾಗೇಶ್ ಗಿರೀಶ್ ನಾಗೇಶ್, ಗಿರೀಶ್, ಮಾನಸ ಮಂಜುಳಾ, ಶ್ವೇತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಇನ್ನಿತರರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


