ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಪತ್ರಕರ್ತ ದೇವರಾಜ್ ಸಹೋದರಿ ಶಶಿಕಲಾ ಎನ್ನುವವರ ಮನೆಯೊಂದರಲ್ಲಿ ಕಳ್ಳತನವಾಗಿದ್ದು, ಇಂದು ಬೆಳಗಿನ ಜಾವ ಪತ್ರಕರ್ತನ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಖತರ್ನಾಕ್ ಕಳ್ಳರು ಕಳ್ಳತನ ಮಾಡಿದ್ದಾರೆ.
ಬೆಳಗಿನ ಜಾವ 3:00 ಸುಮಾರಿಗೆ ಮನೆಯ ಬೀಗ ಹೊಡೆದು, 30 ಗ್ರಾಂ ಬಂಗಾರ ಹಾಗೂ 25,000 ನಗದು ದೋಚಿ ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಪಕ್ಕದ ಬಾಡಿಗೆ ಮನೆಯವರು ಓಡಾಟದ ಶಬ್ದ ಕೇಳಿ ಹೊರ ಬಂದಾಗ ಕಳ್ಳರು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಬಾಡಿಗೆ ಮನೆಯವರು ತಕ್ಷಣ ಮನೆಯ ಓನರ್ ಗೆ ಕರೆ ಮಾಡಿ ತಿಳಿಸಿದ್ದಾರೆ.

ಮಕ್ಕಳ ಶಾಲೆ ಪ್ರಾರಂಭಕ್ಕೆ ಸ್ಕೂಲ್ ಫೀಸ್ ಗೆ ಎಂದು ಇಟ್ಟಿದ್ದ ಹಣ ಕಳ್ಳತನ ಮಾಡಿದ್ದಾರೆ ಎಂದು ಮನೆ ಒಡತಿ ಶಶಿಕಲಾ ತಿಳಿಸಿದ್ದಾರೆ.
ಇನ್ನು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಬೆರಳಚ್ಚು ತಜ್ಞರು, ಡಾಗ್ ಸ್ವಾಡ್ ಭೇಟಿ ನೀಡಿ ಮನೆಯ ಸುತ್ತಮುತ್ತ ಪರಿಶೀಲನೆ ನಡೆಸಿ, ಮನೆಯವರ ಬಳಿ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಆದಷ್ಟು ಬೇಗ ಕಳ್ಳರನ್ನು ಹಿಡಿಯುವುದಾಗಿ ಮನೆಯವರಿಗೆ ಭರವಸೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


