ತುಮಕೂರು: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯು ಭೀಕರವಾಗಿ ಕೊಲೆಯಾಗಿರೋ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಪುಷ್ಪ(32) ಕೊಲೆಯಾದ ದುರ್ದೈವಿಯಾಗಿದ್ದಾರೆ.
ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್, ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಳನ್ನು ಮದುವೆಯಾಗಿದ್ದನು. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದನು.
ಮರದ ಸಾಮಿಲ್ ವೊಂದರಲ್ಲಿ ಹೆಲ್ಪರ್ ಆಗಿ ಶಿವರಾಮ್ ಕೆಲಸ ಮಾಡ್ತಿದ್ದ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗ್ತಿದೆ. ಇದೇ ಗಲಾಟೆಯಲ್ಲಿ ನಿನ್ನೆ ರಾತ್ರಿ ಪತ್ನಿಯನ್ನ ಪತಿ ಶಿವರಾಮ್ ಭೀಕರವಾಗಿ ಕೊಲೆ ಮಾಡಿದ್ದಾರೆ. ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೈದ ಪತಿ ಶಿವರಾಮ್ ನನ್ನ ಬಂಧಿಸಿದ ಹುಲಿಯೂರುದುರ್ಗ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


