ಕೊಪ್ಪಳ: ತಾಲೂಕಿನ ಹೊಸಲಿಂಗಾಪುರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳಾಗಿದ್ದಾರೆ.
ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜೊತೆ ವಸಂತಾರ ಮದುವೆ ಆಗಿತ್ತು. ಆದರೆ ವಸಂತಾ ಕಳೆದ ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿ, ಬಳಿಕ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ತಾಯಿ ಮತ್ತು ಮಗನ ಜೊತೆ ಇದ್ದರು.
ವಸಂತಾ ಹೊಸಲಿಂಗಾಪುರ ಬಳಿ ಇರುವ ಬೊಂಬೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದರು. ನಂತರ ಆರು ತಿಂಗಳ ಹಿಂದೆ ಕುಟುಂಬಸ್ಥರಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬ ಮಗಳು ಕರೆ ಮಾಡಿದ್ದರು. ಆದರೆ ರಾಜೇಶ್ವರಿ ಕರೆ ಸ್ವೀಕರಿಸಲಿಲ್ಲ. ಹೀಗಾಗಿ ಇಂದು ಮುಂಜಾನೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


