ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ.
ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್ ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


