ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕ ಹಲವು ಬಾರಿ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ 13 ವರ್ಷದ ವಿದ್ಯಾರ್ಥಿನಿಯನ್ನು ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.
ಮುಖ್ಯಶಿಕ್ಷಕ ಆಕೆಯನ್ನು ಕಳೆದ ಒಂದು ವರ್ಷದಿಂದ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಪ್ತ ಸಮಾಲೋಚನೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 3 ತಿಂಗಳ ಗರ್ಭಿಣಿ ಎಂದು ತಿಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


