ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, 6,675 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.
ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆಸಲಾಗಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪ– ಸಂಖ್ಯಾತರು ಹಾಗೂ 350 ಮಂದಿ ಅಂಗವಿಕಲರು ಇದ್ದರು.
ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ, ಪಟ್ಟಿ ಸಿದ್ಧಪಡಿಸ ಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ– ಪ್ರಮಾಣ ಪತ್ರ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


