ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿಗೂ ಬಂಧನ ಭೀತಿ ಶುರುವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಡಿ ಭವಾನಿ ಕಾರು ಚಾಲಕ ಅಜಿತ್ ಗೂ ಎಸ್ ಐಟಿ ನೋಟಿಸ್ ನೀಡಿದೆ. ಹೀಗಾಗಿ, ಪ್ರಕರಣ ತಮಗೂ ಉರುಳಾಗಬಹುದು ಅನ್ನೋ ಆತಂಕ ಭವಾನಿ ರೇವಣ್ಣಗೆ ಕಾಡುತ್ತಿದೆ. ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಜಾಮೀನು ಅರ್ಜಿಯ ವಿಚಾರಣೆ ಮಂಗಳವಾರವೂ ನಡೆದಿತ್ತು. ನಂತರ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಅಪಹರಣ ಪ್ರಕರಣದ ದೂರಿನಲ್ಲಿ ಭವಾನಿ ರೇವಣ್ಣ ಹೆಸರಿದ್ದರೂ ಎಫ್ ಐಆರ್ ದಾಖಲಾಗಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಎಸ್ ಐಟಿ ಕೂಡಾ ಈವರೆಗೆ ನೋಟಿಸ್ ಜಾರಿಗೊಳಿಸಿಲ್ಲ.
ಆದರೆ ಪತ್ರಿಕೆಗಳಲ್ಲಿ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪ್ರಕಟವಾಗಿದೆ. ಇದಾದ ಬಳಿಕ ಮೇ 15ರಂದು ಭವಾನಿ ರೇವಣ್ಣ ಎಸ್ ಐಟಿಗೆ ಪತ್ರ ಬರೆದು ತಮ್ಮ ವಿರುದ್ಧದ ಕೇಸಿನ ಸ್ಪಷ್ಟನೆ ಕೇಳಿದ್ದಾರೆ. ಆದರೆ ಎಸ್ ಐಟಿ ಪ್ರತಿಕ್ರಿಯಿಸಿಲ್ಲ. ಈಗ ಮತ್ತೆ 2ನೇ ಬಾರಿಗೆ ನೋಟಿಸ್ ಜಾರಿಯಾಗಿದೆ ಎಂಬ ಸುದ್ದಿ ಬರುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


