ಗುಬ್ಬಿ: ತಾಲ್ಲೂಕಿನ ವೈದ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆಯುತ್ತಿದ್ದ ಡೆಂಗ್ಯೂ ನಿಯಂತ್ರಣ ಕುರಿತ “ಅಡ್ವೋಕಸಿ ಕಾರ್ಯಾಗಾರ”ಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅನಿರೀಕ್ಷಿತ ಭೇಟಿ ನೀಡಿದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸಾಂಕ್ರಾಮಿಕ ರೋಗಗಳ ತಡೆಯುವಿಕೆ, ಶುದ್ಧ ಕುಡಿಯುವ ನೀರಿನ ಮಹತ್ವದ ಕುರಿತು ಅರಿವು ಮೂಡಿಸಿದರು.
ನಂತರ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ತಾಲೂಕು ಆರೋಗ್ಯಾಧಿಕಾರಿ ಬಿಂದು ಮಾದವರಿಗೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ವರ್ ನಾಯಕ್ ಉದ್ದೇಶಿಸಿ, ಸಾಂಕ್ರಾಮಿಕ ರೋಗಗಳು ಕಂಡು ಬಂದ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಹಾಗೂ ತಾಲ್ಲೂಕು ವ್ಯಾಪ್ತಿ ಶುದ್ಧ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA