ತುಮಕೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗಲಿ ಎಂಬ ದೃಷ್ಟಿ ಯಿಂದ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಅನುದಾನ ಹಾಗೂ ಅನುದಾನ ರಹಿತ ಶಾಲೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಹಾಗೂ ಉಳಿದ ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಕಾಯಮಾಗಿ ಹಾಗೂ ದಿನಗೂಲಿ ಮೇಲೆ ಕೆಲಸ ಮಾಡುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲು ಮತದಾರರಿಗೆ ಜೂನ್ ಮೂರರಂದು ಸೋಮವಾರ ವಿಶೇಷ ಸ್ಥಾನ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA