nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ May 29, 2024

    ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಪರಮೇಶ್ವರ

    By adminMay 29, 2024No Comments2 Mins Read
    g parameshwar

    ಬೆಂಗಳೂರು:  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

    ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡು ಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.

    ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎಸ್ಐಟಿಯವರು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದರು.

    ಎಮ್‌ಎಲ್‌ಸಿ ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು ಮಾತನಾಡಿ, ನನ್ನ ಹೇಳಿಕೆಯನ್ನು ಯಾರು ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರೊಂದಿಗೆ ಸಮಾಲೋಚನೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದುದು ಪ್ರಕ್ರಿಯೆ. ಯಾರು ಸಹ ಇದನ್ನು ತಪ್ಪು ಅಂತ ಹೇಳಲಾಗುವುದಿಲ್ಲ. ನಾನು ಸಹ ಕೆಪಿಸಿಸಿ‌ ಅಧ್ಯಕ್ಷನಾಗಿ‌ ಕೆಲಸ ಮಾಡಿದ ಅನುಭವದಿಂದ ಆ‌ ಮಾತನ್ನು ಹೇಳಿದ್ದೇನೆ. ನಾವು ಹೇಳಿದವರಿಗೆ ಅವಕಾಶ ನೀಡಬೇಕು ಅಂತ ಹೇಳಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

    ಯಾರು ಪಕ್ಷಕ್ಕಾಗಿ ದುಡಿದಿದ್ದಾರೋ, ಯಾವ ಸಮುದಾಯ ಪಕ್ಷದ ಜೊತೆ ನಿಂತಿದೆಯೋ ಅಂತವರಿಗೆ ಅವಕಾಶ‌ ಕಲ್ಪಿಸಬೇಕು. ಪಕ್ಷಕ್ಕಾಗಿ‌ ಕೆಲಸ‌ ಮಾಡಿದ ಅನೇಕರಿಗೆ ಅನುಭವ ಇರುತ್ತದೆ. ಅಂತವರೊಂದಿಗೆ ಸಮಾಲೋಚಿಸಿ ಅಭಿಪ್ರಾಯ ಪಡೆಯಬೇಕು ಎಂಬುದನ್ನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು‌.

    ನನ್ನ ಅಭಿಪ್ರಾಯವನ್ನು ನಾನು ಹೇಳಿಬಿಟ್ಟಿದ್ದೇನೆ.‌ ಏಳು ಸ್ಥಾನಗಳು ನಮ್ಮ ಪಕ್ಷಕ್ಕೆ ಬರುತ್ತವೆ. 300 ಅರ್ಜಿ ಬಂದಿವೆ ಎಂಬುದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಆಯ್ಕೆ ಮಾಡುವುದು ಕಷ್ಟದ ಕೆಲಸ. ಹೈಪವರ್ ಕಮಿಟಿ ರಚಿಸಿ, ಸಮಿತಿ ಜೊತೆ ಚರ್ಚಿಸಿದರೆ ಸಲಹೆಗಳು ಬರುತ್ತವೆ. ಹೈಪವರ್ ಕಮಿಟಿ ರಚಿಸುವ ಸಮಯ ಮೀರಿದೆ ಎಂದು ಹೇಳಿದರು.

    ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಯವರನ್ನು ಭೇಟಿ‌ ಮಾಡಿಲ್ಲ. ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಕೆಲಸಗಳಿವೆ. ಯಾವುದಾದರು ತೀರ್ಮಾನ ತೆಗೆದುಕೊಳ್ಳುವಾಗ ಮುಖ್ಯಮಂತ್ರಿಯವರ ಗಮನಕ್ಕೆ ತರಬೇಕಾಗುತ್ತದೆ. ಅವರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.‌

    ಬೆಳ್ಳೂರು ಕ್ರಾಸ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ವಹಿಸಿದ ನಿಗದಿತವಾದ ಜವಾಬ್ದಾರಿಯನ್ನು ಅಧಿಕಾರಿಗಳು ಮಾಡದೇ ಇದ್ದಾಗ, ಅದರಿಂದ ಬೇರೆಬೇರೆ ರೀತಿಯ ತೊಂದರೆಗಳಾದ ಅಮಾನತುಗೊಳಿಸಲಾಗುತ್ತದೆ. ಇಲಾಖಾ ವಿಚಾರಣೆ ನಡೆಯುತ್ತದೆ. ದೊಡ್ಡ ಪ್ರಕರಣಗಳಲ್ಲಿ ಸಿಐಡಿಯವರು ತನಿಖೆ ಮಾಡುತ್ತಾರೆ. ತನಿಖೆಯ ವರದಿಯಲ್ಲಿ ತಪ್ಪು ಕಂಡು ಬಂದಿಲ್ಲ ಎಂದಾದರೆ ಅಮಾನತು ಆದೇಶ ಪಡೆಯಲಾಗುತ್ತದೆ. ಇದು ಇಲಾಖೆಯಲ್ಲಿ ನಡೆಯುವ ಪ್ರಕ್ರಿಯೆ ಎಂದರು.

    ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ‌ ಪ್ರಕರಣದ ಕುರಿತು ಮಾತನಾಡಿ, ಸಿಐಡಿಯವರು ಪ್ರಕರಣವನ್ನು ತೆಗದುಕೊಂಡು ತನಿಖೆ ನಡೆಸುತ್ತಿದೆ. ಬೇರೆಬೇರೆ ಐಟಿ ಕಂಪನಿಗಳಿಗೆ ವರ್ಗಾವಣೆಯಾಗಿರುವ ಆರೋಪ ತನಿಖೆಯಿಂದ ಹೊರಬರುತ್ತದೆ ಎಂದರು

    ಒಂದೊಂದು ಘಟನೆಯಾದಗೂ ವಿಪಕ್ಷದವರು ರಾಜೀನಾಮೆ‌ ಕೇಳುತ್ತಾರೆ. ಹಣ ವರ್ಗಾವಣೆಗೆ ಮೌಖಿಕವಾಗಿ ಆದೇಶ ಕೊಟ್ಟಿದ್ದಾರೆ ಎಂಬ ಆರೋಪ ತನಿಖೆಯಲ್ಲಿ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಈಶ್ವರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಅವರ ಹೆಸರನ್ನು ನೇರವಾಗಿ ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸಚಿವರ ಹೆಸರನ್ನು ಎಲ್ಲಿಯೂ ನೇರವಾಗಿ ಹೇಳಿಲ್ಲ. ತನಿಖೆ ಆಗುವವರೆಗೂ ಕಾಯಬೇಕು ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.