ತುಮಕೂರು: ಹೇಮಾವತಿ ನದಿ ನೀರು ಲಿಂಕ್ ಕೇನಾಲ್ ಕಾಮಗಾರಿ ವಿರೋಧಿಸಿ ಗೃಹ ಸಚಿವ ಪರಮೇಶ್ವರ್ ಮನೆ ಎದುರು ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ತುರುವೇಕೆರೆ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಪರಮೇಶ್ವರ್ ಮನೆ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಗುಬ್ಬಿ ತಾಲ್ಲೂಕು ಕಲ್ಲೂರು ಕ್ರಾಸ್ ಬಳಿ ಪೊಲೀಸರು ಬಂಧಿಸಿದ್ದಾರೆ.
ಇನ್ನೊಂದೆಡೆ ಇಂದು ಬೆಳಗ್ಗೆಯೇ ಮಾಜಿ ಸಚಿವ ಸಗುಡು ಶಿವಣ್ಣ ಅವರನ್ನು ತುಮಕೂರು ನಗರದಲ್ಲಿ ವಶಕ್ಕೆ ತೆಗೆದುಕೊಂಡು ಪೊಲೀಸರು ಬಿಎಆರ್ ಗ್ರೌಂಡ್ ನಲ್ಲಿ ಇರಿಸಿದ್ದಾರೆ.
ಒಂದು ವಾರದ ಹಿಂದೆಯೇ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕುವ ಕುರಿತು ಲಿಂಕ್ ಕೆನಾಲ್ ಯೋಜನೆಯ ಹೋರಾಟ ಸಮಿತಿ ಘೋಷಣೆ ಮಾಡಿತ್ತು. ಅದರ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೂ ಗೃಹ ಸಚಿವ ಪರಮೇಶ್ವರವರ ಮನೆಯದುರು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಮಾಜಿ ಶಾಸಕ ಸೊಗಡು ಶಿವಣ್ಣ ಮತ್ತು ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಸೇರಿದಂತೆ ಜಿಲ್ಲೆಯ ವಿವಿಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಪರಮೇಶ್ವರವರ ಮನೆ ಮುತ್ತಿಗೆಗೆ ಯೋಜನೆ ರೂಪಿಸಿದ್ದರು. ಆದರೆ ಇಬ್ಬರು ಮುಖಂಡರು ಸೇರಿದಂತೆ ಅನೇಕ ಮಂದಿ ಬಿಜೆಪಿ ಮುಖಂಡರನ್ನು ಪೊಲೀಸರು ಮುತ್ತಿಗೆ ಹಾಕುವ ಮುನ್ನವೇ ವಶಕ್ಕೆ ತೆಗೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


