ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡವು, ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಾ ಅಡಿಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ, ಲಕ್ಷಾಂತರ ಮೊತ್ತದ ಅಕ್ರಮ ಅಡಿಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ದಂಡ ವಿಧಿಸಿರುವುದಾಗಿ ವರದಿಯಾಗಿದೆ.
ಈ ವಿಶೇಷ ಕಾರ್ಯಾಚರಣೆಯನ್ನು ಶಿವಮೊಗ್ಗದ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಿದ್ದು, ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ ವ್ಯಾಪಾರಿಗಳ ಮೇಲೆ ಜಿ.ಎಸ್ ಟಿ ಕಾಯ್ದೆ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


