nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಶಾಸಕ ಕೊತ್ತೂರು ಜಿ. ಮಂಜುನಾಥ್
    ರಾಜ್ಯ ಸುದ್ದಿ May 30, 2024

    ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಶಾಸಕ ಕೊತ್ತೂರು ಜಿ. ಮಂಜುನಾಥ್

    By adminMay 30, 2024No Comments2 Mins Read
    kotthur g manjunath

    ಕೋಲಾರ: ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಬಹುಮತ ಅನಿವಾರ್ಯವಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಹೇಳಿದರು.

    ನಗರದಲ್ಲಿ ವಿವಿಧ ಶಾಲಾ ಕಾಲೇಜುಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರವಾಗಿ ಚುನಾವಣಾ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದರು. ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಅಧ್ಯತೆ ನೀಡಬೇಕಾಗಿದೆ. ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಹೀಗಾಗಿ ಡಿ.ಟಿ. ಶ್ರೀನಿವಾಸ್ ಅವರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದರು.


    Provided by
    Provided by

    ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ ಆಯೋಗದ ಸಿದ್ದತೆಯೂ ಕಾಂಗ್ರೆಸ್ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರವು ಅಭಿವೃದ್ದಿಯಾಗಬೇಕಿದೆ. ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಬಲಿಸಿ ಅವರನ್ನು ವಿಧಾನ ಪರಿಷತ್ತಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ.

    ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ. ಇಂತಹವರು ವಿಧಾನಪರಿಷತ್‌ ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರನ್ನು ಜಿಲ್ಲೆಗೆ ಕರೆತಂದು ಶೈಕ್ಷಣಿಕ ಅಭಿವೃದ್ಧಿಗೆ ಗಮನ ಹರಿಸಲಾಗುತ್ತದೆ ಎಂದರು. ಕ್ಷೇತ್ರದಲ್ಲಿ ಸುಮಾರು 18 ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ. ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅದೋಗತಿಗೆ ತಂದು ಕೂರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ ಸರಕಾರವು ಬೌಧ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.

    ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಸರಕಾರದ ಪರವಾಗಿ ಇದ್ದವರನ್ನು ಆಯ್ಕೆ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಮತ್ತು ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹೂಹಳ್ಳಿ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ವೈ. ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಸೇರಿದಂತೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.