“ಇಂಡಿ ತಾಲ್ಲೂಕಿನ ಬಬಲಾದ ಸಸ್ಯಕ್ಷೇತ್ರದಿಂದ ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ 47 ಸಾವಿರ ಸಸಿಗಳನ್ನು ವಿತರಿಸಲಾಗುವುದು” ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ ತಿಳಿಸಿದ್ದಾರೆ.
ಪಟ್ಟಣದ ಸಾಮಾಜಿಕ ಅರಣ್ಯ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ಜೂನ್ 3ರಿಂದ ರೈತರಿಗೆ, ಸಂಘಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ ಮತ್ತು ಸರ್ಕಾರಿ ಕಚೇರಿಗಳಿಗೆ ಸಸಿಗಳನ್ನು ವಿತರಿಸಲಾಗುವುದು. ಸಸಿಗಳು 6X9(₹3) ಮತ್ತು 8X12(₹6) ಬ್ಯಾಗ್ ಸೈಜ್ ನಲ್ಲಿವೆ ಎಂದರು.
ನುಗ್ಗೆ, ಸಾಗವಾನಿ, ಮಹಾಗನಿ, ತಪಸಿ, ಹುಣಸೆ, ಸಸಿಗಳು 6X9 ಬ್ಯಾಗ್ ಸೈಜ್ ನಲ್ಲಿ ಮತ್ತು ಹುಣಸೆ, ಬದಾಮ, ಮೆಹಂದಿ, ಶ್ರೀಗಂಧ, ರಕ್ತ ಚಂದನ, ಬಾರೆ, ಪೆರು, ನಿಂಬೆ, ನುಗ್ಗೆ 8X12 ಬ್ಯಾಗ್ ಸೈಜ್ ನಲ್ಲಿ ದೊರೆಯುತ್ತವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


