ಮೈಸೂರು: ತೀವ್ರ ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಬೇಕು. ಆರ್ ಟಿ ಸಿ ಗೆ ಆಧಾರ್ ಲಿಂಕ್ ಮಾಡುವುದನ್ನು ಸರಳೀಕರಣಗೊಳಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಮೈಸೂರು ತಾಲೂಕಿನ ರೈತರು ಬರಗಾಲ ಸಂಕಷ್ಟದಲ್ಲಿದ್ದು ಕೃಷಿ ಚಟುವಟಿಕೆ ನಡೆಸಲು ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದಾರೆ.
ಬರ ಪರಿಹಾರದ ಹಣ ಎಲ್ಲಾ ರೈತರಿಗೂ ಸಿಗುವಂತಾದರೆ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ರೈತರ ಹಿತ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಹೆಚ್ಚುವರಿ ದರ ಟನ್ ಕಬ್ಬಿಗೆ 150 /- ರೂ ಬಣ್ಣಾರಿ ಸಕ್ಕರೆ ಕಾರ್ಖಾನೆ ರೈತರಿಗೆ ಇನ್ನೂ ಪಾವತಿ ಮಾಡಿಲ್ಲ.
ಈ ಬಗ್ಗೆ ತಾಲೂಕಿನ ಕಬ್ಬು ಬೆಳೆಗಾರ ರೈತರಿಗೆ ಹಣ ಕೊಡಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು. ಇತ್ತೀಚೆಗೆ ಭಾರೀ ಮಳೆ ಗಾಳಿಯಿಂದ ತಾಲೂಕಿನ ರೈತರ ಬಾಳೆ, ಕಬ್ಬು ಮಾವು ಮತ್ತಿತರ ಬೆಳೆಗಳು ತುಂಬಾ ಹಾನಿಯಾಗಿದೆ ಈ ಬಗ್ಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಸಮೀಕ್ಷೆ ನಡೆಸಿ ನ್ಯಾಯಯುತ ಪರಿಹಾರ ಹಣ ಸಮರ್ಪಕವಾಗಿ ರೈತರಿಗೆ ಕೊಡಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


